ಪ್ರಸ್ತುತ ದೇಶದಲ್ಲಿರುವ ಕೋವಿಡ್ 19 ಸೋಂಕಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಕರ್ನಾಟಕ , ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಈ ವರ್ಚುವಲ್ ಸಭೆಗೆ ಆಹ್ವಾನಿಸಲಾಗಿದೆ, ಈ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.ಇದು ಕೊರೊನಾ ಸೋಂಕು ಕಾಣಿಸಿಕೊಂಡು ನಂತರದಿಂದ ಇಲ್ಲಿವರೆಗೆ ಪ್ರಧಾನಿಯವರು ಮುಖ್ಯಮಂತ್ರಿಗಳೊಂದಿಗೆ ನಡೆಸುತ್ತಿರುವ ಏಳನೇ ವಿಡಿಯೊ ಸಂವಾದ. 3ನೇ ಹಂತದ ಲಾಕ್‌ಡೌನ್ ತೆರವುಗೊಳಿಸಿದ ನಂತರ ಮುಖ್ಯಮಂತ್ರಿಗಳೊಂದಿಗೆ ನಡೆಸುತ್ತಿರುವ ಮೊದಲ ವರ್ಚುವಲ್ ಸಭೆಯಾಗಿದೆ.ಆಯಾ ರಾಜ್ಯದ ಸ್ಥಿತಿಗತಿ ಕುರಿತು ತಿಳಿಯಲು.





0 Comments