Ticker

6/recent/ticker-posts

Header Ads Widget

Responsive Advertisement

ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ |ಭಾರತೀಯ ಸೇನೆಯಿಂದ ಪ್ರತ್ಯುತ್ತರ

 


 


ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.

ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ.

ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

 



Post a Comment

0 Comments