Ticker

6/recent/ticker-posts

Header Ads Widget

Responsive Advertisement

ಎಸ್.ಡೀ. ಪಿ.ಐ ನಿಷೇಧಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

 


 


ಬೆಂಗಳೂರು:ಆಗಸ್ಟ್ 20 - ರಾಜ್ಯದಲ್ಲಿ ಎಸ್‍ಡಿಪಿಐ ಸಂಘಟನೆಯನ್ನು ನಿಷೇಧ ಮಾಡುವ ಕುರಿತಂತೆ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರ ಕುರಿತು ಸಾಕ್ಷ್ಯಾಧಾರಗಳ ಸಮೇತ ವರದಿ ಸಲ್ಲಿಸುವಂತೆ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ , ಎಸ್‍ಡಿಪಿಐ ಸಂಘಟನೆಯನ್ನು ನಿಷೇಧ ಮಾಡುವ ಕುರಿತು ಗಂಭೀರ ಚರ್ಚೆ ನಡೆಯಿತು.
ಎಸ್‍ಡಿಪಿಐ ಒಂದು ರಾಜಕೀಯ ಪಕ್ಷವಾಗಿಯೂ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಸಂಘಟನೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರ ಕುರಿತಂತೆ ಗೃಹ ಇಲಾಖೆಯಿಂದ ವರದಿ ತರಿಸಿಕೊಂಡು ನಂತರ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.ಎಂದು ಮೂಲಗಳಿಂದ ತಿಳಿದು ಬಂದಿದೆ.

 



Post a Comment

0 Comments