ಕರ್ನಾಟಕ: ರಾಜ್ಯ ಸರ್ಕಾರ ಕೊರೋನ ಕರ್ಫ್ಯೂ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಹಾಪ್ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ ಇರಲಿದ್ದು, ಅವುಗಳಿಗೆ ವಿನಾಯತಿ ನೀಡಿಲ್ಲ. ಎಪಿಎಂಸಿ, ದಿನಸಿ ಅಂಗಡಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅವಕಾಶ ನೀಡಿದೆ. ವ್ಯಾಪಾರ ವಹಿವಾಟುಗಳನ್ನು ಕೊವಿಡ್ ಮಾರ್ಗಸೂಚಿ ಪಾಲಿಸಿ ಮಾಡಬೇಕು ಎಂದು ತಿಳಿಸಿದೆ. ವ್ಯಾಪಾರಿಗಳು ಮಾರುಕಟ್ಟೆ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂಬ ಷರತ್ತಿನೊಂದಿಗೆ ಅವಕಾಶ ಒದಗಿಸಲಾಗಿದೆ. ಮಾರುಕಟ್ಟೆಗಳಲ್ಲಿ ಜನಸಂದಣಿ ತಪ್ಪಿಸಲು ಸರ್ಕಾರ ಈ ಹೊಸ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
0 Comments