Ticker

6/recent/ticker-posts

Header Ads Widget

Responsive Advertisement

ಗ್ರಾಮ ಪಂಚಾಯತಿ ಸದಸ್ಯರಿಗೂ ಕೋರೋನ ಲಸಿಕೆ ನೀಡಲು ಮನವಿ ಮಾಡಲಾಗಿದೆ - ಸಚಿವ ಕೋಟ ಶ್ರೀನಿವಾಸ ಪೂಜಾರಿ

 


 


ಕೊರೋನ ಕಾರ್ಯಪಡೆ ಸದಸ್ಯರಾಗಿರುವ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಕೊರೋನಾ ವಾರಿಯರ್ಸ್ ಎಂಬುದಾಗಿ ಪರಿಗಣಿಸಿ ಪ್ರಥಮ ಪ್ರಾಶಸ್ತ್ಯದಲ್ಲಿ ಕೊರೋನ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ನಾಳೆ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬೈಂದೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವರು, ಈಗಾಗಲೇ ಸರಕಾರಿ ನೌಕರರಾಗಿರುವ ಗ್ರಾಪಂ ಪಿಡಿಓ ಹಾಗೂ ಇತರ ಸಿಬ್ಬಂದಿಗೆ ಪ್ರಥಮ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡುವ ಕೆಲಸ ಆಗಿದೆ. ಇದೀಗ ಸದಸ್ಯರಿಗೂ ಲಸಿಕೆ ನೀಡುವ ಬಗ್ಗೆ ಬೇಡಿಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.ಮುಂದೆ ಏನು ನಿರ್ಣಯ ಕೈಗೊಳ್ಳುತ್ತಾರೆ ಕಾದು ನೋಡಬೇಕು ಎಂದರು.

 



Post a Comment

0 Comments