Ticker

6/recent/ticker-posts

Header Ads Widget

Responsive Advertisement

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ

 


 


ಕೇರಳ: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ  ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌ ಅವರು ಜಯಿಸಿದರು.
ಇಂದು ಆರಂಭವಾಗಿರುವ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಅಶ್ರಫ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ತೋರಿದ್ದಾರೆ.
ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಕನ್ನಡ ಅಭಿಮಾನ ತೋರಿದ ಕೇರಳ ಶಾಸಕ.

 



Post a Comment

0 Comments