ದ.ಕ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭ ಆಗಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಹಾಗೂ ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಲಾಕ್ ಡೌನ್ ನ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದ್ದು, ಶೇಕಡ 50 ರಷ್ಟು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಬಸ್ ರಸ್ತೆಗಿಳಿದಿರಲಿಲ್ಲ.
ಬುಧವಾರದಿಂದ 7 ದಿನ ಬಸ್ ಓಡಿಸಿದರೆ, 1 ತಿಂಗಳ ತೆರಿಗೆ ಕಟ್ಟಬೇಕು. ಇದು ಕಷ್ಟ ಸಾಧ್ಯ. ಈಗಿನ ಡೀಸೆಲ್ ಬೆಲೆಯಲ್ಲಿ ಶೇ 50 ರಷ್ಟು ಪ್ರಯಾಣಿಕರನ್ನು ಕರೆದೊಯ್ಯುವುದು ನಷ್ಟ ಉಂಟಾಗಲಿದೆ. ಅಲ್ಲದೇ ನಗರದಾದ್ಯಂತ ಕಾಮಗಾರಿಗಾಗಿ ರಸ್ತೆ ಅಗೆದು ಹಾಕಲಾಗಿದೆ. 2 ತಿಂಗಳಿನಿಂದ ನಿಂತಿದ್ದ ಬಸ್‌ಗಳನ್ನು ಗ್ಯಾರೇಜ್‌ಗೆ ತೆಗೆದುಕೊಂಡು ಹೋಗಿ ದುರಸ್ತಿ ಮಾಡಿಸಬೇಕಿದೆ ಎಂದು ಬಸ್ ಮಾಲೀಕರು ಅವರ ಅಳಿಲು ತೋಡಿಕೊಂಡರು.
ಬಸ್ ಉದ್ಯಮಕ್ಕೆ ಲಾಕ್ ಡೌನ್ ಸಂದರ್ಭದಲ್ಲಿ ಬಹಳಷ್ಟು ಏಟು ಬಿದ್ದಿದ್ದು ಸರಕಾರ ಇತ್ತ ಗಮನ ಹರಿಸಬೇಕು.





0 Comments