ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡಿದ ಹಿನ್ನಲೆಯಲ್ಲಿ ವೃತ್ತಿಪರ ಕೋರ್ಸುಗಳ ಸಿಇಟಿ ಪರೀಕ್ಷೆ ನಡೆಸಲು ದಿನ ನಿಗದಿಯಾಗಿದೆ.ಪಿಯುಸಿ ಮಾರ್ಕ್ ಅನ್ನು ಈ ವರ್ಷ ತೆಗೆದುಕೊಳ್ಳೋದಿಲ್ಲ. ಈ ವರ್ಷ ಸಿಇಟಿ ಪರೀಕ್ಷೆಯ ಅಂಕವನ್ನು ಪರಿಗಣಿಸಿಯೇ RANK ನೀಡುವಂತ ಕಾರ್ಯವನ್ನು ಮಾಡಲಾಗುತ್ತದೆ. ಅದೇ ರೀತಿ ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ.
ಮೊದಲ ದಿನ ಮ್ಯಾಥಮೇಟಿಕ್ಸ್ ಹಾಗೂ ಬಯೋಲಜಿ ಪರೀಕ್ಷೆ ನಡೆಯಲಿದೆ. ಎರಡನೇ ದಿನ ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ. ಮೂರನೇ ದಿನ ಗಡಿನಾಡಿನ ಕನ್ನಡಿಗರಿಗೆ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಯಲಿದೆ. ಜೂನ್.15ರಿಂದ ಸಿಇಟಿ ಪರೀಕ್ಷೆ ಪರೀಕ್ಷೆಗೆ ನೊಂದಣಿ ಆರಂಭವಾಗಲಿದೆ ಎಂದರು.





0 Comments