ಬೆಂಗಳೂರು: ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಕುರಿತು ಮಾಹಿತಿ ನೀಡಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.
ಹೈ ಕಮಾಂಡ್ ನಿರ್ದೇಶನದ ಮೇರೆಗೆ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬದಲಾವಣೆ ಕುರಿತು ನನಗೆ ಎಷ್ಟು ತಿಳಿದಿದೆಯೋ ಅಷ್ಟನ್ನೂ ಹೇಳಿದ್ದೇನೆ. ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಈ ಬಗ್ಗೆ ಮುಂದೆ ನಿಮಗೆ ತಿಳಿಸುತ್ತೇನೆ ಎಂದಷ್ಟೇ ಹೇಳಿದರು.
ಕೋವಿಡ್ ಸಂಕಷ್ಟ ಕಾಲದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ, ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸೇವೆ ಮಾಡುವುದು ನಮ್ಮ ಪರಮ ಕರ್ತವ್ಯವಾಗಿದೆ. ಆದರೆ ಇಂತಹ ಕಠಿಣ ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಜೆಡಿಎಸ್ನವರು ಇಂತಹ ಸಂದರ್ಭದಲ್ಲಿ ಕ್ವಾರಂಟೈನ್ನಲ್ಲಿ ಉಳಿದಿದ್ದಾರೆ ಎಂದು ಹೇಳಿದ್ದಾರೆ.





0 Comments