Ticker

6/recent/ticker-posts

Header Ads Widget

Responsive Advertisement

ಕರಾವಳಿ ಭಾಗದಲ್ಲಿ ಮುಂದಿನ ಒಂದುವಾರ ಗುಡುಗು ಸಹಿತ ಬಾರಿ ಮಳೆ,ಹವಾಮಾನ ಇಲಾಖೆ ಸೂಚನೆ - ಪುತ್ತೂರು ನ್ಯೂಸ್

 


 


ಮಂಗಳೂರು: ರಾಜ್ಯದಲ್ಲಿ ಈ ಸಾಲಿನ ಮುಂಗಾರು ಮಳೆ ಇಂದಿನಿಂದ ರಾಜ್ಯಾದ್ಯಂತ ತೀವ್ರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಒಂದು ವಾರ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜೂನ್ 13 ರವರೆಗೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಆ ನಂತರವೂ ಮಳೆ ಮುಂದುವರಿಯುವ ಅಂದಾಜಿದೆ. ಹಾಗಾಗಿ ಅಲ್ಲೆಲ್ಲ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಈ ಮಧ್ಯೆ, ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

 



Post a Comment

0 Comments