ತಂತ್ರಜ್ಞಾನ ದೈತ್ಯ ಎಂದು ಕರೆಯಲ್ಪಡುವ ಗೂಗಲ್ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ಬರುತ್ತಿದೆ. ಆ ಮೂಲಕ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಎಸಗುವ ಹುನ್ನಾರವೊಂದು ನಡೆದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಅನಾವಶ್ಯಕವಾಗಿ ಕನ್ನಡಿಗರನ್ನು, ಕನ್ನಡ ಭಾಷೆಯನ್ನು ಕೀಳೆಂದು ಬಿಂಬಿಸುವ ಯತ್ನದ ವಿರುದ್ಧ ಧ್ವನಿ ಎತ್ತಲಾಗುತ್ತಿದೆ.
ಗೂಗಲ್ನಂತಹ ದೊಡ್ಡ ಸಂಸ್ಥೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. debtconsolidationsquad.com ಎಂಬ ಜಾಲತಾಣದಲ್ಲಿ ಇದು ಮೊದಲು ಕಂಡುಬಂದಿದ್ದು, ಸದ್ಯ ಆ ಲೇಖನವನ್ನು ಹಿಂಪಡೆಯಲಾಗಿದೆ.





0 Comments