ನವದೆಹಲಿ: ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಸಹಾಯವಾಗುವ ಹೊಸ ಕಾಯ್ದೆಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ‘ಮಾದರಿ ಬಾಡಿಗೆ ಕಾಯ್ದೆ’ಗೆ ಅನುಮೋದನೆ ನೀಡಿದೆ.
ಪ್ರಸ್ತುತ ಈಗ ಬಾಡಿಗೆದಾರರಿಂದ 10 ತಿಂಗಳ ಮುಂಗಡ ಬಾಡಿಗೆಯನ್ನು ಪಡೆಯಲಾಗುತ್ತದೆ. ಆದರೆ ಹೊಸ ಕಾಯ್ದೆಯಲ್ಲಿ ಕೇವಲ 2 ತಿಂಗಳ ಬಾಡಿಗೆಯನ್ನು ಮುಂಗಡವಾಗಿ ಪಡೆಯಲು ಮಾತ್ರ ಷರತ್ತನ್ನು ವಿಧಿಸಲಾಗಿದೆ.
ಈ ಕಾಯ್ದೆಯನ್ನು ನೇರವಾಗಿ ಕೇಂದ್ರ ಸರಕಾರ ಜಾರಿ ಮಾಡುವುದಿಲ್ಲ.ಇದನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅವರು ಜಾರಿ ಮಾಡಲಿದ್ದಾರೆ.ಇದು ಯಾವಾಗ ಜಾರಿಗೆ ಬರುತ್ತದೆ ಎಂದು ತಿಳಿದು ಬಂದಿಲ್ಲ.





0 Comments