Ticker

6/recent/ticker-posts

Header Ads Widget

Responsive Advertisement

ಭಟ್ಕಳ ನ್ಯಾಯಾಲಯದಲ್ಲಿ ಬೆಂಕಿ ಅವಘಡ - ಪುತ್ತೂರು ನ್ಯೂಸ್

 


 


ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ರಂಗಿನಕಟ್ಟೆಯಲ್ಲಿರುವ ಜೆ.ಎಂ.ಎಫ್.ಸಿ ನ್ಯಾಯಾಲಯ ಕಟ್ಟಡದಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ದಾಖಲೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರಥಮ ಮಾಹಿತಿಯನ್ನು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಬೆಳಗ್ಗೆ 4:15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಹಲವು ತಾಸುಗಳ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ.  

ಕಡತಗಳಿಗೆ ಹಾನಿ
ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಟ್ಟುಹೋಗಿದೆ. ಕಾಗದಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಾಗಿತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸಾಕಷ್ಟು ಕಡತಗಳನ್ನು ರಕ್ಷಿಸುವ ಪ್ರಯತ್ನ ಮಾಡಿದ್ದು ಸ್ಥಳಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ್ ಶಿವಪೂಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 



Post a Comment

0 Comments