ದ.ಕ: ಎರಡು ವರ್ಷ ಬಿಟ್ಟು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಯೂತ್ ಕಾಂಗ್ರೆಸ್‍ನ ಮುಂದಿನ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಫೈಟ್ ಬಗ್ಗೆ ಪ್ರತಿಕ್ರಿಯಿಸಿದರು. ಈ ವೇಳೆ ಎರಡು ವರ್ಷಗಳ ನಂತರ ಡಿಕೆಶಿ ಸಿಎಂ ಆಗುತ್ತಾರೆ. ಮುಂದೆ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತದೆ. ಕಾಂಗ್ರೆಸ್ ಗೆ ಮತ ಹಾಕಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದರು.
ಕಾಂಗ್ರೆಸ್ ನಲ್ಲಿ ಸದ್ಯ ಮುಖ್ಯಮಂತ್ರಿ ವಿಚಾರ ಸದ್ದು ಮಾಡುತ್ತಿರುವಾಗಲೇ ಡಿಕೆಶಿ ಪರ ಶಿಷ್ಯ ಬ್ಯಾಟಿಂಗ್ ಮಾಡಿದ್ದಾರೆ. ಹೈಕಮಾಂಡ್ ಸೂಚಿಸಿದರೂ ಮತ್ತೆ ಸಿಎಂ ವಿಚಾರ ಪ್ರಸ್ತಾಪ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಬಳಿಕ ಮೀನುಗಾರ ಮಹಿಳೆಯರೊಂದಿಗೆ ನಲಪಾಡ್ ಚರ್ಚೆ ನಡೆಸಿದರು. ಆಗ ಮೀನುಗಾರ ಮಹಿಳೆಯರು, ನೀವೆಲ್ಲ ರಾಜಕಾರಣಿಗಳು ಒಂದೇ ಎಂದರು.





0 Comments