ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಪಕ್ಕದಲ್ಲಿಯೇ ಹಡೀಲು ಬಿದ್ದ ಗದ್ದೆಯಲ್ಲಿ ದೇವಸ್ಥಾನದ ಹಾಗೂ ನವಚೇತನ ಯುವಕ ಮಂಡಲದ ಸಹಭಾಗಿತ್ವದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ "ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ" ಕೃಷಿ ಆಂದೋಲನಕ್ಕೆ ಚಾಲನೆ ನೀಡಿದಂತೆ ಸ್ವತಃ ತಾವೇ ಗದ್ದೆಗೆ ಇಳಿದು ನೇಗಿಲು ಹಿಡಿದು ಎತ್ತುಗಳು ಓಡಿಸುವ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಉಳುಮೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧ್ಯಕ್ಷರಾದ ಶ್ರೀ ಮುಳಿಯ ಕೇಶವ ಪ್ರಸಾದ್, ಸಂಪ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರುಗಳು, ಸಂಘದ ಸದಸ್ಯರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
0 Comments