Ticker

6/recent/ticker-posts

Header Ads Widget

Responsive Advertisement

ಉಡುಪಿಯಲ್ಲಿ ರೆಡ್ ಅಲರ್ಟ್ ಸಮುದ್ರಕ್ಕೆ ಇಳಿದ ನಾಡ ದೋಣಿ ಮೀನುಗಾರರು|Fisherman - ಪುತ್ತೂರು ನ್ಯೂಸ್

 


 


ಉಡುಪಿ: ಹವಾಮಾನ ಇಲಾಖೆ ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧ ಆಗಿದ್ದು 4 ಮೀಟರ್ ವರೆಗೆ ಅಲೆಗಳು ಏಳಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದೆ. ಆದ್ರೂ ಆತಂಕದ ನಡುವೆಯೇ ನಾಡದೋಣಿ ಮೀನುಗಾರರು ಸಮುದ್ರಕ್ಕಿಳಿದಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ ಎರಡು ದಿನಗಳ ಕಾಲ ಕಡಿಮೆಯಾಗಿದ್ದ ಮಾನ್ಸೂನ್ ನಿರಂತರವಾಗಿ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರವಾಗಿ ಅಲ್ಲಲ್ಲಿ ಮಳೆ ಬೀಳುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಅರಬ್ಬಿ ಸಮುದ್ರದಲ್ಲಿ 60ರಿಂದ 70 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು ನದಿಯ ನೀರು ಸರಾಗವಾಗಿ ಸಮುದ್ರ ಸೇರಲು ಸಾಧ್ಯವಾಗುತ್ತಿಲ್ಲ.

 



Post a Comment

0 Comments