ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 2021 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ 33,000 ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ಅನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಉಸ್ತುವಾರಿ ಸಚಿವರು,ಹಿಂದುಳಿದ ವರ್ಗದ ಕಲ್ಯಾಣ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವರು ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ದಿನಾಂಕ 12-07-2021 ರಂದು ಜಿಲ್ಲೆಯ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ಶ್ರೀ ಪ್ರತೀಮ್ ಕುಮಾರ್ ಜಿಲ್ಲಾ ತರಬೇತಿ ಆಯುಕ್ತರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ,ಶ್ರೀ ತ್ಯಾಗಮ್ ಹರೇಕಳ ಜಿಲ್ಲಾ ಕೋವಿಡ್ ಹಾಗೂ ಎಸ್ ಎಸ್ ಎಲ್ ಸಿ ಸಂಯೋಜಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಶ್ರೀ ಭರತ್ ರಾಜ್ ಕೆ ಜಿಲ್ಲಾ ಸಂಘಟಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಇವರು ಉಪಸ್ಥಿತರಿದ್ದರು.





0 Comments