ದ.ಕ:ನೀರಿನ ಹರಿವು ಏರಿಕೆಯಾಗಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ. ಕಾಗವಾಡ ತಾಲೂಕಿನಲ್ಲಿ ಡಂಗೂರ ಸಾರಿಸಿ ಗ್ರಾಮಸ್ಥರನ್ನು ಎಚ್ಚರಿಸಲಾಗ್ತಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಅಬ್ಬರದ ಮಳೆ ಸುರಿಯುತಿದ್ದು, ಕಾರವಾರ ಕಡಲತೀರದಲ್ಲಿ ಬಿರುಗಾಳಿ ಸಹಿತ ಅಬ್ಬರದ ಅಲೆಗಳು ಏಳುತ್ತಿವೆ. ಜಿಲ್ಲೆಯಾದ್ಯಂತ ಭಾರೀ ಮಳೆಯಿಂದ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಇತ್ತ ಉಡುಪಿಯಲ್ಲಿ ,ದ.ಕ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಇನ್ನೆರಡು ದಿನ ಮಳೆ ಮುನ್ಸೂಚನೆ ನೀಡಿದ್ದು, ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
10 ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಚುರುಕು ಪಡೆದಿದ್ದು, ಭಾರೀ ಮಳೆಗೆ ರಸ್ತೆ ಮೇಲೆ ನೀರು ಬಂದು ವಾಹನ ಓಡಾಟಕ್ಕೆ ವ್ಯತ್ಯಯವಾಗಿದೆ. ನದಿ, ಸಮುದ್ರ ತೀರದ ಜನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದನೀಡಿದೆ.





0 Comments